ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಮಳೆಯ ನಡುವೆ ಕಾರೊಂದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ನವದೆಹಲಿಯಿಂದ ಪ್ರವಾಸ ಬಂದಿದ್ದ ಮುಕೇಶ್ ಕುಟುಂಬ ಬಾಬಾಬುಡನ್ ಗಿರಿ ವೀಕ್ಷಣೆಗೆ ಹೊರಟಿತ್ತು. ಎದುರಿನಿಂದ ಬಂದ ಮತ್ತೊಂದು ಕಾರಿಗೆ ಜಾಗ ಬಿಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಎಲ್ಲರನ್ನೂ ಇತರ ಪ್ರವಾಸಿರು ಹೊರಕ್ಕೆ ಎಳೆದು ರಕ್ಷಿಸಿದರು.
ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.