ADVERTISEMENT

ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ದನದ ಮಾಂಸದ ಬಿರಿಯಾನಿ, ಕಬಾಬ್ ನೀಡಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 13:34 IST
Last Updated 15 ಅಕ್ಟೋಬರ್ 2025, 13:34 IST
<div class="paragraphs"><p>ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರೊಂದಿಗೆ&nbsp;ಸಿ.ಟಿ.ರವಿ</p></div>

ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರೊಂದಿಗೆ ಸಿ.ಟಿ.ರವಿ

   

ಚಿಕ್ಕಮಗಳೂರು: ನಗರದ ದನದ ಮಾಂಸದ ಹೋಟೆಲ್‌ಗಳನ್ನು ಬಂದ್ ಮಾಡಿಸುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ದನದ ಮಾಂಸದ ಬಿರಿಯಾನಿ ಮತ್ತು ಕಬಾಬ್‌ ನೀಡುವ ಮೂಲಕ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಗೋವುಗಳ ರಕ್ಷಣೆಗೆ ಆಗ್ರಹಿಸಿ ನಗರದಲ್ಲಿ ಬುಧವಾರ ಮೆರವಣಿಗೆ ನಡೆಸಿ ಆಜಾದ್ ಪಾರ್ಕ್ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಗೋವುಗಳ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ದನದ ಮಾಂಸದ ಹೋಟೆಲ್‌ಗಳು ರಾಜಾರೋಷವಾಗಿ ತೆರೆದುಕೊಂಡಿವೆ ಎಂದು ದೂರಿದರು.

ADVERTISEMENT

ಹೋಟೆಲ್‌ನಿಂದ ಕಾರ್ಯಕರ್ತರು ಪಾರ್ಸೆಲ್ ತಂದಿದ್ದ ದನದ ಮಾಂಸದ ಬಿರಿಯಾನಿ, ಕಬಾಬ್ ಜೊತೆಗೆ ಒಂದು ತಟ್ಟೆಯನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನೀಡಿದರು. ಕೂಡಲೇ ಅಂತಹ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಬಳಿಕ ಮಾತನಾಡಿದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ‘ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಕಳುಹಿಸಲಾಗಿದೆ. ಈಗಲೂ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಧಿಕಾರಿಗಳ ಮನೆಗೆ ಕಳುಹಿಸಲಾಗುವುದು’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.