ADVERTISEMENT

ವರುಣನ ಅರ್ಭಟ : ರಸ್ತೆ ಸಂಚಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 7 ಜುಲೈ 2018, 13:37 IST
Last Updated 7 ಜುಲೈ 2018, 13:37 IST
ಬಿಳಾಲುಕೊಪ್ಪ-ನಂದಿಕುಣಿ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಮಣ್ಣು ಕುಸಿದಿದ್ದು ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಬಿಳಾಲುಕೊಪ್ಪ-ನಂದಿಕುಣಿ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಮಣ್ಣು ಕುಸಿದಿದ್ದು ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.   

ಬಾಳೆಹೊನ್ನೂರು /ಜಯಪುರ: ವರುಣನ ಅರ್ಭಟ ಶನಿವಾರವೂ ಮುಂದುವರೆದಿದ್ದು ಕೆಲವಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದರೆ ಒಂದೆರಡು ಕಡೆಗಳಲ್ಲಿ ಭೂ ಕುಸಿತ ಸಂಭವಿಸಿದೆ.

ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಭದ್ರಾ ನದಿ ತುಂಬಿ ಹರಿಯುತ್ತಿದೆ. ಬಾಳೆಹೊನ್ನೂರು– ಕಳಸ ರಸ್ತೆಯ ಮಹಾಲಗೋಡು ಎಂಬಲ್ಲಿ ಮೋರಿಯ ಮೇಲೆ ನೀರು ಹರಿದ ಪರಿಣಾಮ ಬೆಳಿಗ್ಗೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕೊಪ್ಪ ತಾಲ್ಲೂಕಿನ ಬಿಳಾಲುಕೊಪ್ಪ-ನಂದಿಕುಣಿ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಮಣ್ಣು ಕುಸಿದಿದ್ದು ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಶನಿವಾರ ಬೆಳಿಗ್ಗೆ ಹಾಗೂ ಮಧ್ಯಾಹ್ನದ ನಂತರ ಮಳೆಯ ಪ್ರಮಾಣ ಹೆಚ್ಚಾಗಿತ್ತು.

ಅಡಿಕೆ ಬೆಳೆಗೆ ಬೋರ್ಡೋ ಸಿಂಪಡಣೆ ಕಾರ್ಯ ಭರದಿಂದ ನಡೆಯುತ್ತಿದ್ದು, ಮಳೆಯಿಂದಾಗಿ ಅಡಚಣೆ ಉಂಟಾಗಿದೆ. ಪಿರಿ ಪಿರಿ ಮಳೆಯಿಂದಾಗಿ ಕಾಫಿ ಬೆಳೆಗೆ ಕೊಳೆ ರೋಗ ಆವರಿಸುವ ಭೀತಿ ಉಂಟಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.