
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ವಸತಿ ಸೌಕರ್ಯ ಕಲ್ಪಿಸಲು ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳಿಗೆ ರಜೆ ನೀಡಲಾಗಿದೆ.
ನ.30ರಿಂದ ಡಿ.6ರವರೆಗೆ ರಜೆ ನೀಡಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ರಜೆ ನೀಡದೆ ತರಗತಿ ನಡೆಸಬೇಕು. ಉಳಿದವರಿಗೆ ರಜೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅದೇಶದಲ್ಲಿ ತಿಳಿಸಿದ್ದಾರೆ.
ದತ್ತ ಜಯಂತಿ ಭದ್ರತೆಗೆ 5 ಸಾವಿರ ಪೊಲೀಸರು ಬರಲಿದ್ದು, ಅವರು ತಂಗಲು ಅಗತ್ಯ ಕಟ್ಟಡಗಳನ್ನು ಒದಗಿಸಲು ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. 60 ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳು, 26 ಶಾಲಾ ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.