ತರೀಕೆರೆ: ಕಳೆದ ಮಾರ್ಚ್ 7 ಮತ್ತು 8ರಂದು ಪಟ್ಟಣದ ಬಯಲುರಂಗ ಮಂದಿರದಲ್ಲಿ ನಡೆದ 20ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಸಂಘ-ಸಂಸ್ಥೆ, ಜನಪ್ರತಿನಿಧಿ ಮತ್ತು ಅಧಿಕಾರಿಗಳ ವಿಶೇಷ ಕಾಳಜಿ ಮತ್ತು ಸಹಕಾರದಿಂದ ಯಶಸ್ವಿಯಾಗಿ ನಡೆದಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಯ-ವ್ಯಯ ಮಂಡನಾ ಸಭೆಯಲ್ಲಿ ಮಾತನಾಡಿದರು.
ಸಮ್ಮೇಳನದ ಯಶಸ್ಸಿಗೆ ತಾಲ್ಲೂಕು ಆಡಳಿತ ಉತ್ತಮವಾಗಿ ಸ್ಪಂದಿಸಿದೆ. ಸಮ್ಮೇಳನದ ನಂತರ ಉಳಿದ ಹಣವನ್ನು ಸಾಹಿತ್ಯ ಪರಿಷತ್ತಿನಿಂದ ಪಟ್ಟಣದಲ್ಲಿ ಕನ್ನಡ ಭವನದ ಕಟ್ಟಡ ನಿರ್ಮಿಸಲು ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.
ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ, ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ಮಾತನಾಡಿ, ಶಾಸಕ ಶ್ರೀನಿವಾಸ್ ಅವರ ಮಾರ್ಗದರ್ಶನದಂತೆ ಕಾರ್ಯಕ್ರಮ ರೂಪಿಸಿಕೊಂಡು ಕಾರ್ಯಗತ ಮಾಡಲಾಯಿತು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕಾರದಿಂದ ಸಮ್ಮೇಳನ ಯಶಸ್ವಿಯಾಯಿತು ಎಂದು ತಿಳಿಸಿದರು.
ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಸಮ್ಮೇಳನದ ಆಯ-ವ್ಯಯ ಮಂಡಿಸಿದರು. ತಾಲ್ಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್. ಅನಂತಪ್ಪ, ಕನ್ನಡಶ್ರೀ ಬಿ.ಎಸ್. ಭಗವಾನ್ ಮಾತನಾಡಿದರು.
ಹಣಕಾಸು ಸಮಿತಿ ಅಧ್ಯಕ್ಷ ಮಿಲ್ಪಿಶ್ರೀನಿವಾಸ್, ಟಿ.ಎನ್.ಜಗದೀಶ್, ಕಸಾಪ ನಿಕಟಪೂರ್ವ ಅಧ್ಯಕ್ಷ ನವೀನ್ ಪೆನ್ನಯ್ಯ, ಲೇಖಕ ತ.ಮ.ದೇವಾನಂದ್, ಎಸ್.ಟಿ. ತಿಪ್ಪೇಶಪ್ಪ, ರಾಮಚಂದ್ರಪ್ಪ ಪ್ರಕಾಶ್, ಟಿ.ಸಿ.ದರ್ಶನ್, ಸಿ.ಎಸ್.ಬಸವರಾಜ್, ಮಂಜುನಾಥ್, ಉಮಾ ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.