ಅಜ್ಜಂಪುರ: ತಾಲ್ಲೂಕಿನ ಚೀರನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಚಂದ್ರಕಲಾ ರಘು ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಡಿ.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚಂದ್ರಕಲಾ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅರಣ್ಯಾಧಿಕಾರಿ ವಾಸುದೇವ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ನೂತನ ಅಧ್ಯಕ್ಷೆ ಚಂದ್ರಕಲಾ ರಘು ಮಾತನಾಡಿ, ‘ಸರ್ವ ಸದಸ್ಯರ ವಿಶ್ವಾಸ ಪಡೆದು ಪಂಚಾಯಿತಿಯಲ್ಲಿ ಉತ್ತಮ ಆಡಳಿತ ನೀಡುತ್ತೇನೆ. ಪಂಚಾಯಿತಿ ವ್ಯಾಪ್ತಿ ಗ್ರಾಮಗಳಲ್ಲಿ ಸ್ವಚ್ಚತೆ, ಕುಡಿಯುವ ನೀರು ಸೇರಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು’ ಎಂದರು.
ಪಂಚಾಯಿತಿ ಉಪಾಧ್ಯಕ್ಷೆ ಸಾಕಮ್ಮ ರುದ್ರಾಬೋವಿ, ಶೈಲಾ, ಸಿ.ಬಿ. ಪ್ರವೀಣ, ಪಿಡಿಒ ಹನುಮಂತಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.