ADVERTISEMENT

ಶೃಂಗೇರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 14:09 IST
Last Updated 26 ಡಿಸೆಂಬರ್ 2019, 14:09 IST
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾಂಬೆ ಸನ್ನಿಧಿಯಲ್ಲಿ ಗುರುವಾರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಶರದ್‌ ಅರವಿಂದ ಬೊಬಡೆ ಅವರನ್ನು ದೇಗುಲ ಮಂಡಳಿಯವರು ಸ್ವಾಗತಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾಂಬೆ ಸನ್ನಿಧಿಯಲ್ಲಿ ಗುರುವಾರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಶರದ್‌ ಅರವಿಂದ ಬೊಬಡೆ ಅವರನ್ನು ದೇಗುಲ ಮಂಡಳಿಯವರು ಸ್ವಾಗತಿಸಿದರು.   

ಶೃಂಗೇರಿ: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಶರದ್ ಅರವಿಂದ ಬೊಬಡೆ ಅವರು ಶಾರದಾ ಮಠಕ್ಕೆ ಗುರುವಾರ ಭೇಟಿ ನೀಡಿದರು.

ಮುಖ್ಯನ್ಯಾಯಮೂರ್ತಿಯನ್ನು ಮಠದ ಆಡಳಿತಾಧಿಕಾರಿ ಡಾ.ವಿ.ಆರ್. ಗೌರೀಶಂಕರ್ ಮತ್ತು ಸಿಬ್ಬಂದಿಯು ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡರು. ಬಳಿಕ ಪೊಲೀಸ್ ಇಲಾಖೆಯ ಗೌರವವನ್ನು ಅವರು ಸ್ವೀಕರಿಸಿದರು. ಶಾರದಾಂಬೆ, ತೋರಣ ಗಣಪತಿ, ಶಂಕರಾಚಾರ್ಯ ದೇವಾಲಯಕ್ಕೆ ಭೇಟಿ ನೀಡಿದ ಅವರು, ವಿಶೇಷ ಪೂಜೆ ಸಲ್ಲಿಸಿದರು.

ನರಸಿಂಹವನದ ಗುರುನಿವಾಸಕ್ಕೆ ತೆರಳಿ ಮಠದ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತಿ ಸ್ವಾಮೀಜಿ ಅವರ ಆಶೀರ್ವಾದವನ್ನು ಅವರು ಪಡೆದರು. ಅವರು ಗುರುವಾರ ರಾತ್ರಿ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.