ADVERTISEMENT

‘ನರೇಗಾ ಹಣ ಸದ್ಬಳಕೆ ಮಾಡಿ’

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 4:02 IST
Last Updated 16 ನವೆಂಬರ್ 2022, 4:02 IST
ತರೀಕೆರೆ ತಾಲ್ಲೂಕಿನ ದೋರನಾಳು ಗ್ರಾಮದಲ್ಲಿ ಜಲ ಜೀವನ್ ಯೋಜನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ ನೀಡಿದರು
ತರೀಕೆರೆ ತಾಲ್ಲೂಕಿನ ದೋರನಾಳು ಗ್ರಾಮದಲ್ಲಿ ಜಲ ಜೀವನ್ ಯೋಜನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ ನೀಡಿದರು   

ತರೀಕೆರೆ: ಜಿಲ್ಲೆಯಲ್ಲಿ ನರೇಗಾ ಯೋಜನೆಗೆ ಹೆಚ್ಚು ಒತ್ತು ನೀಡಿರುವುದು ಸಂತಸ ತಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲ್ಲೂಕಿನ ದೋರನಾಳು ಗ್ರಾಮದಲ್ಲಿ ಜಲ ಜೀವನ್ ಯೋಜನೆಯಡಿ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಸಕ ಡಿ.ಎಸ್.ಸುರೇಶ್‌ ಮಾತನಾಡಿ, ‘ಕ್ಷೇತ್ರದಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಮ್ಮ ಅಧಿಕಾರಾವಧಿಯಲ್ಲಿ ಕ್ಷೇತ್ರದಲ್ಲಿ ತಾರತಮ್ಯ ಮಾಡದೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ’ ಎಂದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜು, ಸಿಇಒ ಜಿ.ಪ್ರಭು ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಎಸ್ಪಿ ಉಮಾ ಪ್ರಶಾಂತ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.