
ಪ್ರಜಾವಾಣಿ ವಾರ್ತೆ
ಚಿಕ್ಕಮಗಳೂರು: ಪದವಿ, ಸ್ನಾತಕೋತ್ತರ ಪದವಿ ವಿದ್ಯಾಲಯಗಳು ಮಂಗಳವಾರ ಪುನರಾರಂಭವಾಗಿವೆ. ವಿದ್ಯಾರ್ಥಿಗಳ ಸಂಖ್ಯೆ ತೀವ್ರ ಕಡಿಮೆ ಇತ್ತು.
ನಗರದ ಐಡಿಎಸ್ ಜಿ ಕಾಲೇಜಿನಲ್ಲಿ ಸುಮಾರು 60 ವಿದ್ಯಾರ್ಥಿಗಳು ಇದ್ದರು. ತರಗತಿಗಳು ನಡೆಯಲಿಲ್ಲ.
ಕೊಠಡಿಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸಜ್ಜುಗೊಳಿಸಲಾಗಿದೆ. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.