ಆಲ್ದೂರು: ಹೋಬಳಿಯ ವ್ಯಾಪ್ತಿಯಲ್ಲಿ ನಿರಂತರ ಗಾಳಿ ಮಳೆಯಿಂದ 15ಕ್ಕೂ ಹೆಚ್ಚು ಮನೆಗಳು ಹಾನಿಯಾಗಿದೆ. ಆಲ್ದೂರು, ಕೆಳಗೂರು, ಸತ್ತಿಹಳ್ಳಿ, ದೊಡ್ಡಮಾಗರವಳ್ಳಿ ಪಂಚಾಯಿತಿ ವ್ಯಾಪ್ತಿಯ ಸಂತ್ರಸ್ತರ ಕುಟುಂಬಗಳಿಗೆ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಕಿಟ್ ವಿತರಿಸಿದರು.
ಶಾಸಕರ ಸೂಚನೆಯ ಮೇರೆಗೆ ತೆರಳಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಡಿತರ ಕಿಟ್ ವಿತರಿಸಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಬಿರ್, ಹೋಬಳಿ ಅಧ್ಯಕ್ಷ ಕೆಳಗೂರು ಪೂರ್ಣೇಶ್ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.