ADVERTISEMENT

ಎಂಇಎಸ್‌ ಪುಂಡಾಟಿಕೆ; ಕಾಂಗ್ರೆಸ್‌ ಷಡ್ಯಂತ್ರ: ಸಿ.ಟಿ. ರವಿ ಆರೋಪ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 16:12 IST
Last Updated 20 ಡಿಸೆಂಬರ್ 2021, 16:12 IST
ಸಿ.ಟಿ.ರವಿ
ಸಿ.ಟಿ.ರವಿ   

ಚಿಕ್ಕಮಗಳೂರು: ‘ಎಂಇಎಸ್‌ ಪುಂಡಾಟಿಕೆ ಹಿಂದೆ ಕಾಂಗ್ರೆಸ್‌ ಕೈವಾಡ ಇದೆ. ಸಂಘರ್ಷ ಸೃಷ್ಟಿಸಿ ರಾಜಕೀಯ ದುರ್ಲಾಭ ಪಡೆಯಲು ಷಡ್ಯಂತ್ರ ನಡೆಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೇ ಇವೆಲ್ಲದರ ನಿರ್ಮಾಪಕ, ನಿರ್ದೇಶಕ. ಅವರ ಬೆಂಬಲಿಗರೇ ಕೃತ್ಯಗಳಲ್ಲಿ ಪಾಲ್ಗೊಂಡಿದ್ದಾರೆ’ ಎಂದು ದೂರಿದರು.

‘ಕೊಲ್ಹಾಪುರದಲ್ಲಿ ಕನ್ನಡ ಬಾವುಟ ಸುಡುವಾಗ ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು. ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಡಿಕೆಶಿ, ಜಮೀರ್‌ ಅಹಮದ್‌ ಅವರ ಕಟ್ಟಾ ಬೆಂಬಲಿಗರು. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಮಾಡಿದ್ದವರ ಹಿಂದೆ ಎಂಇಎಸ್‌, ಕಾಂಗ್ರೆಸ್‌ ಇದೆ. ಈಗ ಬಸವೇಶ್ವರ ಪ್ರತಿಮೆಗೆ ಅಪಮಾನ ಮಾಡಲಾಗಿದೆ. ಜಾತಿ, ಭಾಷಾ ಸಂಘರ್ಷ ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಸಂಚು ಇದು’ ಎಂದು ಆರೋಪಿಸಿದರು.

ADVERTISEMENT

‘ಈ ಷಡ್ಯಂತ್ರ ಬಯಲಿಗೆ ಎಳೆಯಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವರಿಗೆ ಒತ್ತಾಯಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.