ಚಿಕ್ಕಮಗಳೂರು:ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಗರದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ಮುಗಿಸಿ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಚಕ್ರ ಜಾಮ್ ಆಗಿ ರಸ್ತೆ ಬದಿಗೆ ಜಾರಿದೆ. ಈ ವೇಳೆ ವಾಹನದಲ್ಲಿದ್ದ ಸಿಬ್ಬಂದಿಯೊಬ್ಬರಿಗೆ ಪೆಟ್ಟಾಗಿದೆ.
ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪ ಘಟನೆ ನಡೆದಿದೆ.
ಗಾಯಾಳುವನ್ನುಆಸ್ಪತ್ರೆಗೆ ಕರೆದೊಯ್ದ ಬಳಿಕೆ ಸಿದ್ದರಾಮಯ್ಯ ಅಲ್ಲಿಂದ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.