ADVERTISEMENT

ಶ್ರೀನಿವಾಸ ಹೆಬ್ಬಾರ್ ನಿಧನ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 1:52 IST
Last Updated 7 ನವೆಂಬರ್ 2020, 1:52 IST
ಶ್ರೀನಿವಾಸ ಹೆಬ್ಬಾರ್
ಶ್ರೀನಿವಾಸ ಹೆಬ್ಬಾರ್   

ಕಳಸ: ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ, ತೋಟದೂರಿನ ಜಮೀನ್ದಾರರಾಗಿದ್ದ ಶ್ರೀನಿವಾಸ ಹೆಬ್ಬಾರ್ (52) ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಕೋವಿಡ್‌–19ಗೆ ತುತ್ತಾಗಿದ್ದ ಅವರು ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಒಂದೂವರೆ ತಿಂಗಳ ಹಿಂದಷ್ಟೇ ಅವರ ತಂದೆ ಅನಾರೋಗ್ಯದಿಂದ ನಿಧನರಾಗಿದ್ದರು.

ADVERTISEMENT

ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷರೂ, ಕೂಟ ಮಹಾಜಗತ್ತಿನ ಪದಾಧಿಕಾರಿಯೂ ಆಗಿದ್ದ ಅವರು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿದ್ದರು. ಇದೇ 7ರಂದು ಬೆಳಿಗ್ಗೆ 10.30ಕ್ಕೆ ಕಳಸದ ರೋಟರಿ ಭವನದಲ್ಲಿ ವಿವಿಧ ಸಂಘಟನೆಗಳಿಂದ ಸಂತಾಪ ಸಭೆ ನಡೆಯಲಿದೆ.

ಡಿ.ಕೆ. ಶಿವಕುಮಾರ್ ಸಂತಾಪ: ಶ್ರೀನಿವಾಸ ಹೆಬ್ಬಾರ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

‘ಹೆಬ್ಬಾರ್ ಅವರು ಉತ್ತಮ ಸಂಘಟಕರಾಗಿದ್ದರು. ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಹೆಬ್ಬಾರ್ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು ಹಾಗೂ ಬಂಧು-ಬಳಗದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.