ADVERTISEMENT

ಗೋಪಿಕೃಷ್ಣ ಕಾಂಗ್ರೆಸ್‌ಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 4:57 IST
Last Updated 3 ಡಿಸೆಂಬರ್ 2021, 4:57 IST
ತರೀಕೆರೆಯ ಎಚ್.ಎಂ.ಗೋಪಿಕೃಷ್ಣ (ಕುಳಿತಿರುವವರಲ್ಲಿ ಬಲದಿಂದ ಮೊದಲನೆಯವರು) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದರು.
ತರೀಕೆರೆಯ ಎಚ್.ಎಂ.ಗೋಪಿಕೃಷ್ಣ (ಕುಳಿತಿರುವವರಲ್ಲಿ ಬಲದಿಂದ ಮೊದಲನೆಯವರು) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದರು.   

ತರೀಕೆರೆ: ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹುಣಸಘಟ್ಟ ಗ್ರಾಮದ ಎಚ್.ಎಂ. ಗೋಪಿಕೃಷ್ಣ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಬೆಂಗಳೂರಿನ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ತಮ್ಮ ಪತ್ನಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಸೂಯ ಅವರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.

‘ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಕಾರ್ಯಕರ್ತನಾಗಿ ದುಡಿದಿದ್ದೆ. ಆದರೆ, ಆ ಪಕ್ಷಗಳು ತಮ್ಮನ್ನು ಬಳಸಿಕೊಂಡು ತಮಗೆ ಟಿಕೆಟ್ ನೀಡದೆ ತಾರತಮ್ಯ ಮಾಡಿವೆ. ಇದೀಗ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟರ ಕಲ್ಯಾಣದ ಗುರಿಯನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷ ಸೇರಿದ್ದೇನೆ. ಪಕ್ಷದ ವರಿಷ್ಠರು ಸೂಚಿಸಿದ ಕೆಲಸವನ್ನು ಸ್ಥಳೀಯ ಮುಖಂಡರೊಂದಿಗೆ ಸೇರಿ ಮಾಡುತ್ತೇನೆ. ಪಕ್ಷ ಸಂಘಟನೆಯ ಜೊತೆಗೆ ಇದೀಗ ವಿಧಾನ ಪರಿಷತ್ ಅಭ್ಯರ್ಥಿಯಾಗಿರುವ ಗಾಯತ್ರಿ ಶಾಂತೇಗೌಡ ಅವರ ಗೆಲುವಿಗೆ ಪೂರ್ಣ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.