ಚಿಕ್ಕಮಗಳೂರು: ತಾಲ್ಲೂಕಿನ ಸರಪನಹಳ್ಳಿ ಬಳಿಯ ವಸತಿ ಶಾಲೆಯ17 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ.
‘ಶಾಲೆಯಲ್ಲಿ ಒಟ್ಟು 175 ಮಕ್ಕಳು ಇದ್ದು, ಈ ಪೈಕಿ 17 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಮೂವರನ್ನು ಚಿಕ್ಕಮಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಶಾಲೆಯ ಪ್ರಾಚಾರ್ಯ ವೇಣು ‘ಪ್ರಜಾವಾಣಿ’ಗೆ ತಿಳಿಸಿದರು.
‘14 ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ. ಲಕ್ಷಣರಹಿತವಾಗಿದ್ದು, ಎಲ್ಲರಿಗೂ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.