ಚಿಕ್ಕಮಗಳೂರು: ಕೋವಿಡ್‌ನಿಂದಾಗಿ ನಗರದ ಶಂಕರಪುರದ 62 ವರ್ಷದ ಪುರುಷ ಶುಕ್ರವಾರ ಬೆಳಗಿನ ಜಾವ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. 13 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶಂಕರಪುರದ ವ್ಯಕ್ತಿ ಇದೇ 2ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ ಹೊಸ ಪ್ರಕರಣ ಪತ್ತೆಯಾಗಿಲ್ಲ. ಸಕ್ರಿಯ ಪ್ರಕರಣಗಳು 46 ಇವೆ. ಈವರೆಗಿನ ಕೋವಿಡ್ ಪ್ರಕರಣಗಳು ಸಂಖ್ಯೆ 129 ಕ್ಕೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.