ADVERTISEMENT

ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 2:41 IST
Last Updated 8 ಜೂನ್ 2022, 2:41 IST

ಮೂಡಿಗೆರೆ: ಮನೆಗೆ ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಮೇ 25ರಂದು ವಿದ್ಯಾರ್ಥಿನಿ ಕಾಲೇಜಿನಿಂದ ವಾಪಸ್‌ ಊರಿಗೆ ಹೋಗಲು ನಿಂತಿದ್ದ ಸಂದರ್ಭದಲ್ಲಿ ಅಂಗಡಿ ಗ್ರಾಮದ ದೇವರಾಜ್ ಎಂಬಾತ ಬೈಕಿನಲ್ಲಿ ಬಂದು ಊರಿಗೆ ಡ್ರಾಪ್ ಕೊಡುತ್ತೇನೆಂದು ಹೇಳಿದ್ದಾನೆ. ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಮೇ 26ರಂದು ಗೋಣಿಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ದೇವರಾಜ್ ಎಂಬವರನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT