ADVERTISEMENT

ಚಿಕ್ಕಮಗಳೂರು: ದತ್ತ ಜಯಂತಿಗೆ ಭಕ್ತರ ಕಲರವ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 4:01 IST
Last Updated 20 ಡಿಸೆಂಬರ್ 2021, 4:01 IST
ಚಿಕ್ಕಮಗಳೂರು ತಾಲ್ಲೂಕಿನ ಬಾಬಾಬುಡನ್‌ ಗಿರಿಯಲ್ಲಿ ದತ್ತ ಪಾದುಕೆ ದರ್ಶನಕ್ಕಾಗಿ ಭಕ್ತರು ಭಾನುವಾರ ಸಾಲುಗಟ್ಟಿ ನಿಂತಿದ್ದರು. –ಪ್ರಜಾವಾಣಿ ಚಿತ್ರ
ಚಿಕ್ಕಮಗಳೂರು ತಾಲ್ಲೂಕಿನ ಬಾಬಾಬುಡನ್‌ ಗಿರಿಯಲ್ಲಿ ದತ್ತ ಪಾದುಕೆ ದರ್ಶನಕ್ಕಾಗಿ ಭಕ್ತರು ಭಾನುವಾರ ಸಾಲುಗಟ್ಟಿ ನಿಂತಿದ್ದರು. –ಪ್ರಜಾವಾಣಿ ಚಿತ್ರ   

ಚಿಕ್ಕಮಗಳೂರು: ದತ್ತ ಜಯಂತಿಗೆ ಭಾನುವಾರ ವಿವಿಧೆಡೆಗಳಿಂದ ಭಕ್ತರ ದಂಡು ಹರಿದುಬಂದಿತ್ತು. ಶ್ರೀಗುರುದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ದತ್ತ ಪಾದುಕೆ ದರ್ಶನ ಮಾಡಿದರು.

ಮಂಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಮೈಸೂರು ಸಹಿತ ವಿವಿಧ ಜಿಲ್ಲೆಗಳಿಂದ ಭಕ್ತರು ಬಂದಿದ್ದರು. ಗಿರಿಯಲ್ಲಿ ಭಕ್ತರ ಕಲರವ ಮೇಳೈಸಿತ್ತು.

ನಸುಕಿನಿಂದಲೇ ಕೆಲವು ಮಾಲಾಧಾರಿಗಳು ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ದತ್ತಪೀಠಕ್ಕೆ ಸಾಗಿದರು. ಮತ್ತೆ ಕೆಲವರು ವಾಹನಗಳಲ್ಲಿ ಸಾಗಿದರು. ಪಾದುಕೆ ದರ್ಶನ ಮಾಡಿ, ಭಕ್ತಿ ಸಮರ್ಪಿಸಿದರು. ಮೂರು ದಿನಗಳಿಂದ ನಡೆದ ದತ್ತ ಜಯಂತ್ಯುತ್ಸವ ಭಾನುವಾರ ಸಂಪನ್ನವಾಯಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಎಂ.ಕೆ. ಪ್ರಾಣೇಶ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.