ADVERTISEMENT

ಚಿಕ್ಕಮಗಳೂರು | ದತ್ತ ಜಯಂತಿಗೆ ಚಾಲನೆ: ಮುತಾಲಿಕ್ ಸೇರಿ ನೂರಾರು ಮಂದಿ ಮಾಲೆಧಾರಣೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 7:00 IST
Last Updated 26 ನವೆಂಬರ್ 2025, 7:00 IST
   

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಶ್ರೀರಾಮ ಸೇನೆಯಿಂದ ಆಚರಣೆಗೊಳ್ಳುವ ದತ್ತ ಜಯಂತಿ ಅಂಗವಾಗಿ ಮಾಲಧಾರಣೆ ಕಾರ್ಯಕ್ಕೆ ಬುಧವಾರ ಚಾಲನೆ ದೊರೆಯಿತು.

ನಗರದ ಕಾಮಧೇನು ಗಣಪತಿ ದೇಗುಲದಲ್ಲಿ ದತ್ತಾತ್ರೇಯ ಸ್ವಾಮಿಗೆ ಪೂಜೆ ನೆರವೇರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿ ನೂರಾರು ಕಾರ್ಯಕರ್ತರು ಮಾಲೆಧಾರಣೆ ಮಾಡಿಕೊಂಡರು.

ಇಂದಿನಿಂದ ಒಂಬ ದಿನಗಳ ಕಾಲ ದತ್ತ ಜಯಂತಿ ಕಾರ್ಯಕ್ರಮಗಳು ನಡೆಯಲಿವೆ. ಡಿ.2 ರಂದು ಅನುಸೂಯ ಜಯಂತಿ, 3 ರಂದು ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ, 4ರಂದು ದತ್ತ ಪಾದುಕೆ ದರ್ಶನವನ್ನು ದತ್ತ ಮಾಲಧಾರಿಗಳು ಮಾಡಲಿದ್ದಾರೆ. ಮನ್ನೆಚ್ಚರಿಕೆ ಕ್ರಮವಾಗಿ ಮುಳ್ಳಯ್ಯನಗಿರಿ ಸುತ್ತಮುತ್ತಲ ಪ್ರವಾಸಿ ತಾಣಗಳಿಗೆ ಬೇರೆ ಪ್ರವಾಸಿಗರ ಭೇಟಿಯನ್ನು ಡಿ.1ರ ಬೆಳಿಗ್ಗೆ 6ರಿಂದ ಡಿ.5ರ ಬೆಳಿಗ್ಗೆ 10 ಗಂಟೆ ತನಕ ಜಿಲ್ಲಾಡಳಿತ ನಿರ್ಬಂಧಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.