ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ಇದೇ 12 ರಿಂದ 14 ರವರೆಗೆ ನಡೆಯಲಿರುವ ದತ್ತಮಾಲಾ ಅಭಿಯಾನಕ್ಕೆ ಚಾಲನೆ ದೊರೆತಿದೆ.
ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಭಕ್ತರಿಗೆ ಮಾಲೆಧಾರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಬಜರಂಗದಳದ ಮುಖಂಡ ರಘು ಸಕಲೇಶಪುರ ಸೇರಿ ನೂರಕ್ಕೂ ಹೆಚ್ಚು ಭಕ್ತರು ಮಾಲಾಧಾರಣೆ ಮಾಡಿಕೊಂಡರು.
ಡಿ.12ರಂದು ಅನಸೂಯ ಜಯಂತಿ, 13ರಂದು ಶೋಭಾಯಾತ್ರೆ, 14ರಂದು ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿ ಸಾವಿರಾರು ಭಕ್ತರು ದತ್ತ ಪಾದುಕೆ ದರ್ಶನ ಮಾಡಲಿದ್ದಾರೆ.
ದತ್ತ ಜಯಂತಿ ಅಂಗವಾಗಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಪ್ರವಾಸಿ ತಾಣಗಳಿಗೆ ಬೇರೆ ಪ್ರವಾಸಿಗರ ಭೇಟಿಯನ್ನು ಡಿ.11ರ ಬೆಳಿಗ್ಗೆ 6 ಗಂಟೆಯಿಂದ ಡಿ. 15ರ ಬೆಳಿಗ್ಗೆ 10 ಗಂಟೆ ತನಕ ನಿರ್ಬಂಧಿಸಲಾಗಿದೆ. ಸ್ಥಳೀಯರ ಸಂಚಾರ, ಈಗಾಗಲೇ ಕಾಯ್ದಿರಿಸಿರುವ ಹೋಮ್ ಸ್ಟೆ, ರೆಸಾರ್ಟ್ ಗಳಿಗೆ ತೆರಳಲು ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.