ADVERTISEMENT

ಡಿಸಿಸಿ ಬ್ಯಾಂಕ್‌ ಈಗ ಸಂಪೂರ್ಣ ಗಣಕೀಕೃತ: ಡಿ.ಎಸ್.ಸುರೇಶ್‍

ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್‍ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 5:47 IST
Last Updated 21 ನವೆಂಬರ್ 2025, 5:47 IST
ತರೀಕೆರೆ ಪಟ್ಟಣದ ಅರಮನೆ ಹೋಟೆಲ್ ಸಭಾಂಗದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ‘ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವಿನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳ ದಿನ ಹಾಗೂ ಸಮಾರೋಪ ಸಮಾರಂಭದ ನಡೆಯಿತು.
ತರೀಕೆರೆ ಪಟ್ಟಣದ ಅರಮನೆ ಹೋಟೆಲ್ ಸಭಾಂಗದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ‘ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವಿನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳ ದಿನ ಹಾಗೂ ಸಮಾರೋಪ ಸಮಾರಂಭದ ನಡೆಯಿತು.   

ತರೀಕೆರೆ: ನಮ್ಮ ಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಂಪೂರ್ಣ ಗಣಕೀಕೃತವಾಗಿದ್ದು, ಕೆಲವೇ ದಿನಗಳಲ್ಲಿ ಯುಪಿಐ ವ್ಯವಸ್ಥೆಯಾಗಲಿದ್ದು, ಅದರಿಂದ ಪೋನ್‍ ಪೇ, ಗೂಗಲ್ ಪೇ, ಸ್ಕ್ಯಾನ್ ಮೊದಲಾದ ವ್ಯವಸ್ಥೆಗಳನ್ನು ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್‍ ಹೇಳಿದರು.

ಪಟ್ಟಣದ ಅರಮನೆ ಹೋಟೆಲ್ ಸಭಾಂಗದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ,  ಜಿಲ್ಲಾ ಸಹಕಾರ ಯೂನಿಯನ್ ಮತ್ತು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಹಾಸನ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಸಹಕಾರ ಇಲಾಖೆ, ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಸಹಕಾರ ಸಂಘಗಳ ಸಯೋಗದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ನಮ್ಮ ತಂಡ ಬ್ಯಾಂಕಿನ ಆಡಳಿತದ ಅಧಿಕಾರ ಹಿಡಿದಾಗ ಬ್ಯಾಂಕ್ ಮುಳುಗಿ ಹೋಗುತ್ತದೆ ಎಂದು ಅಪಹಾಸ್ಯ ಮಾಡಿದ್ದರು. ಆದರೆ ನಮ್ಮ ಅವಧಿಯಲ್ಲಿ ಅವ್ಯವಹಾರ, ಮೋಸ ಆಗಿಲ್ಲ. ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ರಾಜ್ಯದಲ್ಲಿಯೇ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿಗೆ ಭಾಜನವಾಗಿದೆ’ ಎಂದು ವಿವರಿಸಿದರು.

ADVERTISEMENT

ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಪ್ರವೇಶವಾಗಬಾರದು. ಒಂದು ವೇಳೆ ರಾಜಕೀಯ ಪ್ರವೇಶವಾದರೆ ಸಹಕಾರಿ ಸಂಘ ಹಾಳಾಗುತ್ತದೆ. ಸಹಕಾರ ಕ್ಷೇತ್ರದಲ್ಲಿ ಪ್ರಶಸ್ತಿ ನೀಡುವಾಗ ಪಕ್ಷಾತೀತವಾಗಿರಬೇಕು. ತಾರತಮ್ಯ ಇರಬಾರದು. ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಯುವಕರು ಮತ್ತು ರೈತರಿಗೆ ಹೆಚ್ಚಿನ ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಡಾ. ಜಿ.ಎಸ್. ಮಹಾಬಲ ಪ್ರಾಸ್ತಾವಿಕವಾಗಿ ಮಾತನಾಡಿ 121 ವರ್ಷಗಳ ಇತಿಹಾಸವಿರುವ ಈ ಸಹಕಾರಿ ಕ್ಷೇತ್ರದಲ್ಲಿ ವರ್ಷದಿಂದ ವರ್ಷಕ್ಕೆ ಸಹಕಾರಿ ಕ್ಷೇತ್ರದಲ್ಲಿ ಆಗುತ್ತಿರುವ ಚಟುವಟಿಕೆಗಳ ಬಗ್ಗೆ ಚಿಂತನ –ಮಂಥನ ಮಾಡಲು ಸಹಕಾರ ಸಪ್ತಾಹವನ್ನು ನಡೆಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಸಾಲ ಸೌಲಭ್ಯ ವಿತರಿಸುವಲ್ಲಿ  ಸಹಕಾರಿ ಕ್ಷೇತ್ರ ಬಹುದೊಡ್ಡ ಪಾತ್ರ ನಿರ್ವಹಿಸುತ್ತಿವೆ. ಕೇವಲ ಹಣಕಾಸು ವ್ಯವಹಾರವಲ್ಲದೇ ಹಲವು ಕ್ಷೇತ್ರಗಳಲ್ಲಿ ಸಹಕಾರ ಕ್ಷೇತ್ರ ವ್ಯಾಪಿಸಿಕೊಂಡಿದೆ ಎಂದರು.

ಬೆಂಗಳೂರು ಸಹಕಾರ ಮಹಾಮಂಡಳಿ ನಿರ್ದೇಶಕ ಬಿ.ಸಿ.ಲೋಕಪ್ಪಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್. ಆನಂದಪ್ಪ, ಡಿಸಿಸಿ ಬ್ಯಾಂಕ್ ಸಿಇಒ ಪ್ರವೀಣ್ ಬಿ.ನಾಯಕ್, ಚಿಕ್ಕಮಗಳೂರು ಡಿ.ಆರ್.ತೇಜಸ್ವಿನಿ ಡಿ.ಎಸ್. ಮಾತನಾಡಿದರು.

ಜಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಪಿ.ಶಶಿಕುಮಾರ್ ಸ್ವಾಗತಿಸಿದರು, ಗುಳ್ಳದಮನೆ ವಸಂತಕುಮಾರ್ ವಂದಿಸಿದರು. ಯೂನಿಯನ್‍ನ ಯಶಸ್‍ ನಿರೂಪಿಸಿದರು. ಅಜ್ಜಂಪುರ ಸಹಕಾರ ಸಂಘದ ಮಹಿಳಾ ಸದಸ್ಯರು ಪ್ರಾರ್ಥಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.