ADVERTISEMENT

ಕುಡಿದು ಆಸ್ಪತ್ರೆಯಲ್ಲಿ ಬೆತ್ತಲಾಗಿ ಮಲಗಿದ ವೈದ್ಯ: ಚಿಕಿತ್ಸೆ ಸಿಗದೆ ರೋಗಿ ಸಾವು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 2:51 IST
Last Updated 2 ಮಾರ್ಚ್ 2020, 2:51 IST
ಅಜ್ಜಂಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ರಾತ್ರಿ ಪಾನಮತ್ತರಾಗಿ ಮಲಗಿರುವ ವೈದ್ಯ ಡಾ.ಚನ್ನಕೇಶವಮೂರ್ತಿ.
ಅಜ್ಜಂಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ರಾತ್ರಿ ಪಾನಮತ್ತರಾಗಿ ಮಲಗಿರುವ ವೈದ್ಯ ಡಾ.ಚನ್ನಕೇಶವಮೂರ್ತಿ.   

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಚನ್ನಕೇಶವಮೂರ್ತಿ ಶನಿವಾರ ರಾತ್ರಿ ಪಾನಮತ್ತರಾಗಿ ಕೊಠಡಿಯಲ್ಲಿ ನಗ್ನವಾಗಿ ಬಿದ್ದಿದ್ದು, ಈ ವೇಳೆ ಆಸ್ಪತ್ರೆಗೆ ಕರೆತರಲಾಗಿದ್ದ ಹೆಬ್ಬೂರಿನ ಪುಟ್ಟಮ್ಮ (70) ಎಂಬುವವರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ.

‘ಆಸ್ಪತ್ರೆಯಲ್ಲಿ ವೈದ್ಯರು ಅಸಭ್ಯ ವರ್ತನೆ ತೋರಿದ್ದಾರೆ ಮತ್ತು ಚಿಕಿತ್ಸೆ ನೀಡದೆ ಕರ್ತವ್ಯ ಪಾಲಿಸಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಮೃತರ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

‘ರಜೆ ಮೇಲೆ ತೆರಳುವಂತೆಡಾ.ಚನ್ನಕೇಶವಮೂರ್ತಿ ಅವರಿಗೆ ಸೂಚಿಸಿದ್ದೇನೆ. ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ಸಿಬ್ಬಂದಿ, ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುತ್ತೇನೆ. ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಕಠಿಣ ಕ್ರಮಕ್ಕೆ ಶಿಫಾರಸು ಮಾಡುತ್ತೇನೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.