ಪ್ರಾತಿನಿಧಿಕ ಚಿತ್ರ
ಕೊಪ್ಪ(ಚಿಕ್ಕಮಗಳೂರು): ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎರಡು ವರ್ಷದ ಅವಧಿಯಲ್ಲಿ ಮೃತಪಟ್ಟ ಇಬ್ಬರು ವಿದ್ಯಾರ್ಥಿನಿಯರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕೊಪ್ಪದಲ್ಲಿ ಗುರುವಾರ ಬಂದ್, ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಾಗರಿಕ ಹಿತರಕ್ಷಣಾ ವೇದಿಕೆ ಕರೆ ನೀಡಿದ್ದ ಕೊಪ್ಪ ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ಔಷಧ ಅಂಗಡಿ, ಬ್ಯಾಂಕ್, ಪೆಟ್ರೋಲ್ ಬಂಕ್, ಶಾಲಾ– ಕಾಲೇಜು, ಸರ್ಕಾರಿ ಕಚೇರಿ ಹೊರತುಪಡಿಸಿ ಉಳಿದಂತೆ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಆಟೊ, ಬಸ್ ಸೇವೆ ಎಂದಿನಂತೆ ಇತ್ತು. ಜನರ ಓಡಾಟ ವಿರಳವಾಗಿತ್ತು.
ಮುಖಂಡ ಡಿ.ಎನ್. ಜೀವರಾಜ್ ಅವರು, ‘ಧರ್ಮಸ್ಥಳ ಪ್ರಕರಣದಲ್ಲಿ ಅಜ್ಞಾತ ವ್ಯಕ್ತಿಯ ಪತ್ರಕ್ಕೆ ಎಸ್ಐಟಿ ರಚಿಸುವ ಸರ್ಕಾರ, ಈ ಪ್ರಕರಣವನ್ನು ಕಡೆಗಣಿಸಿದೆ. ಹೆಚ್ಚಿನ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.