ಆಲ್ದೂರು: ಬಾಳೆಹಳ್ಳಿ ಕೃಷ್ಣಪ್ಪ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಪರಿಸರದಲ್ಲಿ ಬೀದಿ ನಾಯಿಗಳ ದಾಳಿಗೆ ಜಿಂಕೆ ಮೃತಪಟ್ಟಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ವಲಯ ಅರಣ್ಯ ಅಧಿಕಾರಿ ಹರೀಶ್, ಸ್ಥಳೀಯರ ಮಾಹಿತಿ ಹಿನ್ನೆಲೆ ಜಿಂಕೆಯ ಮೃತದೇಹವನ್ನು ವಶಕ್ಕೆ ಪಡೆದಿದ್ದು, ಮೇಲ್ನೋಟಕ್ಕೆ ಬೀದಿನಾಯಿಗಳು ಕಚ್ಚಿ ಗಾಯಗೊಳಿಸಿರುವ ಕುರುಹುಗಳು ಕಂಡುಬಂದಿದೆ. ವನ್ಯಜೀವಿ ಪಶು ವೈದ್ಯ ಮಸಿಯಣ್ಣ ಆರನ ಕಟ್ಟೆ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇಲಾಖೆಯ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.