ADVERTISEMENT

ಚಿಕ್ಕಮಗಳೂರು | ಜಿಂಕೆ ಬೇಟೆ: ಪಾರ್ಟಿ ಮಾಡುತ್ತಿದ್ದ ಆರು ಜನರ ಬಂಧನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2023, 4:43 IST
Last Updated 21 ಆಗಸ್ಟ್ 2023, 4:43 IST
   

ಚಿಕ್ಕಮಗಳೂರು: ಜಿಂಕೆಯೊಂದನ್ನು ಬೇಟೆಯಾಡಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೊಡಿ ಪ್ರಾದೇಶಿಕ ವಲಯ ವ್ಯಾಪ್ತಿಯ ಕಾಫಿ ತೋಟದಲ್ಲಿ 25 ಕೆ.ಜಿ ತೂಕದ ಜಿಂಕೆಯನ್ನು ಶಿಕಾರಿ ಮಾಡಿದ್ದರು. ಬಾಡೂಟಕ್ಕೆ ತಯಾರಿ ನಡೆಸಿದ್ದಾಗ ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ 8 ಕೆ.ಜಿ. ಜಿಂಕೆ ಮಾಂಸ ವಶಕ್ಕೆ ಪಡೆದಿದ್ದಾರೆ.

ಜಿಂಕೆ ಬೇಟಿಯಾಡಿದ ಮಹಮೊದ್ ಶಕೀಲ್ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.