ಚಿಕ್ಕಮಗಳೂರು: ನವದೆಹಲಿಯ ಕೆಂಪುಕೋಟೆ ಬಳಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗಗಳಲ್ಲಿ ಪೊಲೀಸ್ ಇಲಾಖೆ ಭದ್ರತೆ ಹೆಚ್ಚಿಸಿದೆ. ಜಿಲ್ಲೆಗೆ ಬರುವ ಹಾಗೂ ಜಿಲ್ಲೆಯಿಂದ ಹೊರಡುವ ಎಲ್ಲಾ ವಾಹನಗಳನ್ನೂ ನಿಖರವಾಗಿ ತಪಾಸಣೆ ನಡೆಸುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಚಾರ್ಮಾಡಿ ಘಾಟಿ ಹತ್ತಿ ಬರುವ ವಾಹನಗಳನ್ನು ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಪೊಲೀಸರು ತಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಬರುವ ಪ್ರಯಾಣಿಕರು ಮತ್ತು ಪ್ರವಾಸಿಗರ ವಿವರ ಕಲೆ ಹಾಕುತ್ತಿದ್ದಾರೆ.
ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ತಾಣಗಳಿದ್ದು, ಜನಸಂದಣೆ ಸೇರುವ ಕಡೆ ಹೆಚ್ಚಿನ ನಿಗಾ ವಹಿಸಲಾಗಿದೆ. ಎಚ್ಚರ ವಹಿಸಲು ಎಲ್ಲ ಪೊಲೀಸ್ ಠಾಣೆಗಳಿಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳು, ಬಸ್ ನಿಲ್ದಾಣಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.