ADVERTISEMENT

‘2ಎ ಮೀಸಲಾತಿ ಕಲ್ಪಿಸದಿದ್ದರೆ ಅ.1ರಿಂದ ಧರಣಿ’

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 4:03 IST
Last Updated 2 ಸೆಪ್ಟೆಂಬರ್ 2021, 4:03 IST
ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ   

ಚಿಕ್ಕಮಗಳೂರು: ‘ಇನ್ನೊಂದು ತಿಂಗಳೊಳಗೆ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸದಿದ್ದರೆ, ಅ.1ರಿಂದ ಧರಣಿ ಮಾಡಲು ನಿರ್ಧರಿಸಿದ್ದೇವೆ’ ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ಕಲ್ಪಿಸುತ್ತಾರೆ ಎಂಬ ವಿಶ್ವಾಸ ಇದೆ. ನಮ್ಮ ಅಭಿಯಾನ 1ರಂದು ಬೆಂಗಳೂರು ತಲುಪಲಿದೆ. ಮೀಸಲಾತಿ ಕಲ್ಪಿಸಿದರೆ ಅಭಿನಂದನಾ ಸಮಾರಂಭ ಮಾಡುತ್ತೇವೆ. ಮೀಸಲಾತಿ ಕಲ್ಪಿಸಲು ವಿಳಂಬ ಮಾಡಿದರೆ ಧರಣಿ ಸತ್ಯಾಗ್ರಹ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT