ಕಳಸ: ಹೊರನಾಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದರು.
ಹೊರನಾಡಿನಲ್ಲಿ ಆಸ್ಪತ್ರೆ ಕಾರ್ಯಾರಂಭಿಸಿ ವರ್ಷಗಳೇ ಕಳೆದರೂ ಈವರೆಗೂ ಕಾಯಂ ವೈದ್ಯರೇ ಇಲ್ಲವಾಗಿದೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ಕೊಡುವ ಹೊರನಾಡು ಕ್ಷೇತ್ರದಲ್ಲಿ ಆರೋಗ್ಯ ಸಮಸ್ಯೆ ಇರುವ ಭಕ್ತರು ಇದ್ದೇ ಇರುತ್ತಾರೆ. ಆದರೆ, ಇಲ್ಲಿನ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ ಆಸ್ಪತ್ರೆಯೇ ಉಪಯೋಗಕ್ಕೆ ಬರುತ್ತಿಲ್ಲ ಎಂದು ಗ್ರಾಮಸ್ಥ ಅವಿನಾಶ್ ಹೇಳಿದರು.
ಆಸ್ಪತ್ರೆಯ ಕಟ್ಟಡ, ಮೂಲಭೂತ ಸೌಲಭ್ಯಗಳು ಇಲ್ಲಿದೆ. ಆದರೆ, ವೈದ್ಯರು ಇಲ್ಲವೆಂದು ಜನರು ಬೇಸರ ವ್ಯಕ್ತಪಡಿಸಿದರು.
ಪ್ರವಾಸಿ ತಾಣವಾದ ಹೊರನಾಡಿನ ಆಸ್ಪತ್ರೆಗೆ ವೈದ್ಯರ ನೇಮಕ ಆಗಬೇಕಿದೆ. ಶಾಸಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಗ್ರಾಮಸ್ಥ ಮಹಾವೀರ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.