ಚಿಕ್ಕಮಗಳೂರು: 60 ವರ್ಷಕ್ಕೂ ಕಡಿಮೆ ಇರುವವರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಪ್ರಕರಣಗಳು ಕಡೂರು ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದ್ದು, ಹೆಚ್ಚಿನ ತನಿಖೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಸಾಮಾಜಿಕ ಭದ್ರತಾ ವಿಭಾಗದ ಅಧಿಕಾರಿಗಳು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ ಎಂಬ ಆರೋಪಗಳಿವೆ.
ಕಡೂರು ತಾಲ್ಲೂಕಿನವರೇ ಅಲ್ಲದವರಿಗೂ ಇದೇ ತಾಲ್ಲೂಕಿನವರೆಂದು ಲಾಗಿನ್‌ನಲ್ಲಿ ಸುಳ್ಳು ನಮೂದಿಸಿ ವೃದ್ಧಾಪ್ಯ ವೇತನ ಮಂಜೂರು ಮಾಡಿದ್ದಾರೆ ಎಂಬ ದೂರು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದೆ.
‘35–40 ವರ್ಷದವರಿಗೂ ವೃದ್ಧಾಪ್ಯ ವೇತನವನ್ನು ಉಪತಹಶೀಲ್ದಾರ್ ಮಂಜೂರು ಮಾಡಿದ್ದಾರೆಂಬ ಒಂದು ದೂರು ಬಂದಿದೆ. ಇದನ್ನು ಆಧರಿಸಿ ತನಿಖೆ ನಡೆಸಲು ತರೀಕೆರೆ ಉಪವಿಭಾಗಾಧಿಕಾರಿಗೆ ಆದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.