ಶೃಂಗೇರಿ: `ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು' ಎಂದು ಬ್ಲಾಕ್ ಕಾಂಗ್ರೆಸ್‍ನ ಮಹಿಳಾ ಘಟಕದ ಅಧ್ಯಕ್ಷೆ ಶಕೀಲಾ ಗುಂಡಪ್ಪ ಆಗ್ರಹಿಸಿದ್ದಾರೆ.
`ಎಚ್.ಡಿ ಕುಮಾರಸ್ವಾಮಿಯವರು ತಮ್ಮ ಹೇಳಿಕೆ ಮೂಲಕ ರಾಜ್ಯದ ಹೆಣ್ಣು ಮಕ್ಕಳನ್ನು ಮತ್ತು ರಾಜ್ಯ ಸರ್ಕಾರದ ಮಹತ್ತರ ಯೋಜನೆಗಳನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಮಹಿಳಾ ಕಾಂಗ್ರೆಸ್ ಖಂಡಿಸುತ್ತದೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ' ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.