ADVERTISEMENT

ಕಳಸ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ಚಳವಳಿ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 3:58 IST
Last Updated 28 ಜುಲೈ 2020, 3:58 IST
ಕಳಸ ಸಮೀಪದ ಬಾಳೂರು ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀನಾಥ್ ಅವರನ್ನು ಕಳಸ ಬ್ಲಾಕ್ ಘಟಕದ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಆರ್.ಪ್ರಭಾಕರ್ ಸೋಮವಾರ ಸನ್ಮಾನಿಸಿದರು
ಕಳಸ ಸಮೀಪದ ಬಾಳೂರು ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀನಾಥ್ ಅವರನ್ನು ಕಳಸ ಬ್ಲಾಕ್ ಘಟಕದ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಆರ್.ಪ್ರಭಾಕರ್ ಸೋಮವಾರ ಸನ್ಮಾನಿಸಿದರು   

ಕಳಸ: ಕಳಸ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ಇದೇ ಆಗಸ್ಟ್ 1ರಿಂದ 15ರವರೆಗೆ ಪೋಸ್ಟ್ ಕಾರ್ಡ್ ಚಳವಳಿ ನಡೆಸಲಾಗುತ್ತಿದೆ ಎಂದು ಇಲ್ಲಿನ ಬ್ಲಾಕ್ ಕಾಂಗ್ರೆಸ್ ಘಟಕ ತಿಳಿಸಿದೆ.

‘ಹಿಂದಿನ ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರಕಾರ ಕಳಸ ತಾಲ್ಲೂಕು ಘೋಷಣೆ ಮಾಡಿ ವರ್ಷ ಕಳೆದಿದೆ. ಆದರೆ, ಈಗಿನ ಸರ್ಕಾರ ಈವರೆಗೂ ಅಂತಿಮ ಅಧಿಸೂಚನೆ ಹೊರಡಿಸದೆ ಜನರಿಗೆ ಈಗಲೂ ಮೂಡಿಗೆರೆಗೆ ತೆರಳುವ ಅನಿವಾರ್ಯತೆ ತಂದಿದೆ. ತಾಲ್ಲೂಕು ಕೇಂದ್ರದ ಅನಿವಾರ್ಯತೆ ಬಗ್ಗೆ ಮುಖ್ಯಮಂತ್ರಿಯ ಗಮನ ಸೆಳೆಯಲು ಇದೇ ಆಗಸ್ಟ್ 1ರಿಂದ 15 ದಿನಗಳ ಕಾಲ ಎಲ್ಲ ಸಾರ್ವಜನಿಕರು ಮತ್ತು ಸಂಘಸಂಸ್ಥೆಗಳು ಪೋಸ್ಟ್ ಕಾರ್ಡ್ ಬರೆಯುವ ಮೂಲಕ ಚಳವಳಿ ನಡೆಸಬೇಕು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಸುದ್ದಿಗಾರರ ಮೂಲಕದ ಮನವಿ ಮಾಡಿದ್ದಾರೆ.

‘ನಮ್ಮ ಜಿಲ್ಲಾ ಉಸ್ತುವಾರಿ ಸಚಿವರೇ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದಾರೆ. ಆದರೆ, ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಕಳಸಕ್ಕೆ ಒಂದು ರೂಪಾಯಿ ಅನುದಾನವನ್ನೂ ನೀಡಿಲ್ಲ. ಈ ವಿಚಾರದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ವೈಫಲ್ಯ ಎದ್ದು ಕಾಣುತ್ತಿದೆ’ ಎಂದು ಅವರು ಟೀಕಿಸಿದ್ದಾರೆ.

ADVERTISEMENT

‘ಕೋವಿಡ್ ರೋಗದ ತಪಾಸಣೆ ನಡೆಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ. ಅವರು ಮನೆಮನೆಗೂ ತೆರಳಿ ಮಾಸ್ಕ್ ಧರಿಸುವುದು, ಸಾನಿಟೈಸರ್ ಬಳಕೆ ಮತ್ತಿತರ ಕೋವಿಡ್ ಸಂಬಂಧಿತ ಮಾಹಿತಿ ನೀಡುತ್ತಾರೆ’ ಎಂದೂ ಶ್ರೀನಿವಾಸ್ ತಿಳಿಸಿದರು.

ಜಿಲ್ಲಾ ಪಂಚಾಯತಿ ಸದಸ್ಯ ಕೆ.ಆರ್.ಪ್ರಭಾಕರ್, ತಾಲ್ಲೂಕು ಪಂಚಾಯಿತಿ ಸದಸ್ಯ ಹಿತ್ತಲಮಕ್ಕಿ ರಾಜೇಂದ್ರ, ಬಾಳೂರು ಹೋಬಳಿ ಘಟಕದ ಅಧ್ಯಕ್ಷ ಶ್ರೀನಾಥ್, ಮುಖಂಡರಾದ ಕೆ.ಸಿ.ಧರಣೇಂದ್ರ, ಹರ್ಷ, ವಿಶ್ವನಾಥ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.