
ಪ್ರಜಾವಾಣಿ ವಾರ್ತೆ
ಚಿಕ್ಕಮಗಳೂರು: ಮಲ್ಲೇನಹಳ್ಳಿ ಬಿಂಡಿಗ ದೇವಿರಮ್ಮ ಜಾತ್ರಾ ಮಹೋತ್ಸವದ ಅಂಗವಾಗಿ ಮಲ್ಲೇನಹಳ್ಳಿ ಮತ್ತು ಹೊಸಕೋಟೆ ಗ್ರಾಮಗಳ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಅ.19ರ ಬೆಳಿಗ್ಗೆ 6 ಗಂಟೆಯಿಂದ ಅ.20ರ ರಾತ್ರಿ 10 ಗಂಟೆ ತನಕ ಸುತ್ತಮುತ್ತಲ 10 ಕಿಲೋ ಮೀಟರ್ ಮತ್ತು ಕೈಮರದಲ್ಲಿನ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.