ADVERTISEMENT

ಚಿಕ್ಕಮಗಳೂರು: ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಜಿಲ್ಲಾ ಬ್ರಾಹ್ಮಣ ಮಹಾಸಭಾ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಜುಲೈ 2023, 12:50 IST
Last Updated 1 ಜುಲೈ 2023, 12:50 IST
ನಿವೇಶನ ಜಾಗಕ್ಕೆ ಒತ್ತಾಯಿಸಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು ಶಾಸಕ ಎಚ್‌.ಡಿ.ತಮ್ಮಯ್ಯ ಅವರಿಗೆ ಮನವಿ ಸಲ್ಲಿಸಿದರು
ನಿವೇಶನ ಜಾಗಕ್ಕೆ ಒತ್ತಾಯಿಸಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು ಶಾಸಕ ಎಚ್‌.ಡಿ.ತಮ್ಮಯ್ಯ ಅವರಿಗೆ ಮನವಿ ಸಲ್ಲಿಸಿದರು   

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿವಿಧ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮ ಆಯೋಜನೆಗೆ ಅನುಕೂಲವಾಗುವಂತೆ ನಗರದಲ್ಲಿ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಒತ್ತಾಯಿಸಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು ಶಾಸಕ ಎಚ್.ಡಿ. ತಮ್ಮಯ್ಯ ಅವರಿಗೆ ಮನವಿ ಸಲ್ಲಿಸಿದರು.

‘ನಗರ ವ್ಯಾಪ್ತಿಯ ಗವನಹಳ್ಳಿಯ ಸರ್ವೇ ನಂಬರ್ 93ರಲ್ಲಿ 5 ಎಕರೆ ಜಾಗವನ್ನು ಸಂಘದ ಕಾರ್ಯ ಚಟುವಟಿಕೆಗಳಿಗೆ ನೀಡುವಂತೆ ಈ ಹಿಂದೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಇದುವರೆಗೂ ಯಾವುದೇ ಸ್ಪಂದನೆ ದೊರೆತಿಲ್ಲ. ಮನವಿ ಪುರಸ್ಕರಿಸಿ ಜಾಗವನ್ನು ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.

‘ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಗರದ ಬೈಪಾಸ್ ರಸ್ತೆಯಲ್ಲಿ ದಾನಿಗಳು ನಿರ್ಮಿಸಿಕೊಟ್ಟ ವಿದ್ಯಾರ್ಥಿ ನಿಲಯವನ್ನು ಆಡಳಿತ ಮಂಡಳಿ ಸಹಕಾರ ಸಂಘದ ನಿಯಮಗಳಿಗೆ ವಿರುದ್ಧವಾಗಿ ಅಂಬೇಡ್ಕರ್ ವಸತಿ ಶಾಲೆಗೆ ಬಾಡಿಗೆಗೆ ನೀಡಿದೆ. ಇದರಿಂದ ಸಮುದಾಯದ ಭಾವನೆಗೆ ಧಕ್ಕೆಯಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ವಿದ್ಯಾರ್ಥಿ ನಿಲಯವನ್ನು ಸಮುದಾಯಕ್ಕೆ ನೀಡಲು ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಎಲ್.ಶ್ರೀಧರ್, ಜಿಲ್ಲಾ ಸಂಚಾಲಕಿ ರಮಾಪ್ರಸಾದ್, ಉಪಾಧ್ಯಕ್ಷ ಭುಜಂಗರಾವ್, ಪ್ರಧಾನ ಕಾರ್ಯದರ್ಶಿ ಎಂ.ಆರ್.ರವಿಶಂಕರ್, ಸಂಘಟನಾ ಕಾರ್ಯದರ್ಶಿ ಎ.ಎಸ್.ಪ್ರಕಾಶ್, ಖಜಾಂಚಿ ಬಿ.ಸಿ.ಜಯರಾಮ್, ಪ್ರಸಾದ್, ಬಿ.ಎಲ್.ಅಚ್ಯುತಮೂರ್ತಿ, ನಾಗರಾಜ ಭಟ್, ಕುಮಾರ್, ಬಾಲಾಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.