ನರಸಿಂಹರಾಜಪುರ: ಚುಕ್ಕಿ ಜಿಂಕೆ ಬೇಟೆಯಾಡಿದ ಆರೋಪ ಮೇಲೆ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ದೊಡ್ಡಿನತಲೆ ನಿವಾಸಿಗಳಾದ ಎಸ್.ಎನ್.ಲೋಕೇಶ್ ಹಾಗೂ ಚಿನ್ನಯ್ಯ ಬಂಧಿತ ಆರೋಪಿಗಳು.
ಆರಂಬಳ್ಳಿ ಮೀಸಲು ಅರಣ್ಯದ ಸರ್ವೆ ನಂ. 48ರಲ್ಲಿ ಚುಕ್ಕಿ ಜಿಂಕೆ ಬೇಟೆ ಮಾಡಿ, ಎಸ್.ಎನ್.ಲೋಕೇಶ್ ಮನೆಯಲ್ಲಿ ಮಾಂಸ ಬೇಯಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ನೇತೃತ್ವದ ತಂಡದವರು, ಆರೋಪಿಗಳನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.