ಚಿಕ್ಕಮಗಳೂರು ನಗರದಲ್ಲಿ ಸುರಿದ ಮಳೆ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ವಿಪರೀತ ಮಳೆ ಮತ್ತು ಬಿರುಗಾಳಿ ಬೀಸುತ್ತಿರುವುದರಿಂದ ಆರು ತಾಲ್ಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲ್ಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ಗುರುವಾರ ರಜೆ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.