ಮೂಡಿಗೆರೆ: ಇ–ಸ್ವತ್ತು ತಂತ್ರಾಂಶದಲ್ಲಿ ‘94ಸಿ’ ಅಡಿಯಲ್ಲಿ ಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಇ–ಸ್ವತ್ತು ಮಾಡಲು ತೆಗೆದಿರುವುದನ್ನು ಕೂಡಲೇ ಸರಿಪಡಿಸಬೇಕು ಎಂದು ಗೋಣಿಬೀಡು ಗ್ರಾ.ಪಂ. ಅಧ್ಯಕ್ಷ ಜಿ.ಎಸ್. ದಿನೇಶ್ ಒತ್ತಾಯಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ ಹಕ್ಕುಪತ್ರ ಪಡೆದವರಿಗೆ ಗ್ರಾ.ಪಂಯಲ್ಲಿ ಇ–ಸ್ವತ್ತು ಮಾಡಲು ಈ ಹಿಂದೆ ಅವಕಾಶ ಕಲ್ಪಿಸಲಾಗಿತ್ತು. 94ಸಿ ಅಡಿಯಲ್ಲಿ ಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ 11ಎ ಮಾಡಿಕೊಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಇ–ಸ್ವತ್ತು ತಂತ್ರಾಂಶದಲ್ಲಿ ‘94ಸಿ’ಯಡಿ ಪಡೆದ ಹಕ್ಕುಪತ್ರಗಳ ಪರಿಗಣನೆ ತೆಗೆದು ಹಾಕಲಾಗಿದೆ. ಇದರಿಂದ ಹಕ್ಕುಪತ್ರ ಪಡೆದ ಫಲಾನುಭವಿಗಳು ಇ–ಸ್ವತ್ತು ನಿರ್ಮಿಸಿ ಕೊಡುವಂತೆ ಗ್ರಾ.ಪಂಗೆ ಅರ್ಜಿ ಸಲ್ಲಿಸುತ್ತಿದ್ದು, ಇ–ಸ್ವತ್ತು ನಿರ್ಮಿಸಲು ಸಾಧ್ಯವಾಗದ ಕಾರಣ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ದೂರುತ್ತಿದ್ದಾರೆ.
ಗೋಣಿಬೀಡು ಗ್ರಾಮ ಪಂಚಾಯಿತಿಯಲ್ಲಿಯೇ 60ಕ್ಕೂ ಅಧಿಕ ಅರ್ಜಿಗಳು ವಿಲೇಯಾಗದೇ ಉಳಿದಿವೆ. ಕೂಡಲೇ ತಂತ್ರಾಂಶದಲ್ಲಿ ಮಾರ್ಪಾಡುಗೊಳಿಸಿ, ಇ–ಸ್ವತ್ತು ನಿರ್ಮಿಸಲು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.