ADVERTISEMENT

‘ಮಕ್ಕಳ ಪೋಷಣೆಗಾಗಿ ಪೌಷ್ಟಿಕ ಆಹಾರ ಸೇವಿಸಿ’

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 5:11 IST
Last Updated 24 ಸೆಪ್ಟೆಂಬರ್ 2022, 5:11 IST
ನರಸಿಂಹರಾಜಪುರ ತಾಲ್ಲೂಕು ಶೀಗುವಾನಿ ಸರ್ಕಾರಿ ಶಾಲೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.
ನರಸಿಂಹರಾಜಪುರ ತಾಲ್ಲೂಕು ಶೀಗುವಾನಿ ಸರ್ಕಾರಿ ಶಾಲೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.   

ಶೀಗುವಾನಿ(ಎನ್.ಆರ್.ಪುರ): ಗರ್ಭಿಣಿ ಮತ್ತು ಬಾಣಂತಿಯರು ಮಕ್ಕಳ ಪೋಷಣೆಗಾಗಿ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಅಂಗನವಾಡಿ ಮೇಲ್ವಿಚಾರಕಿ ದಾಕ್ಷಾಯಿಣಿ ತಿಳಿಸಿದರು.

ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ, ಅಂಗನವಾಡಿ ಹಾಗೂ ಶಾಲಾ ಶಿಕ್ಷಕರ ನೇತೃತ್ವದಲ್ಲಿ ನಡೆದ ಪೋಷಣ್ ಅಭಿಯಾನದಲ್ಲಿ ಅವರು ಮಾತನಾಡಿದರು. ಪೌಷ್ಟಿಕ ಆಹಾರ ಸೇವಿಸಬೇಕು. ಯಾವುದೇ ಕಾರಣಕ್ಕೂ ಫಾಸ್ಟ್‌ಫುಡ್ ಸೇವಿಸಬಾರದು ಎಂದರು.

ಆರೋಗ್ಯ ಇಲಾಖೆಯ ಕಾರ್ಯಕರ್ತೆ ಸೋನಿ, ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ನಾಗರತ್ನಾ ವಹಿಸಿದ್ದರು. ಬಾಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಿಯೇಶ್, ಮಮತಾ, ಅಂಗನವಾಡಿ ಶಿಕ್ಷಕಿ ಉಷಾ, ಮುಖ್ಯ ಶಿಕ್ಷಕ ಮಂಜಪ್ಪ, ಸಹ ಶಿಕ್ಷಕಿ ಸವಿನಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.