
 ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನ ಕೆರೆಕಟ್ಟೆ ಬಳಿ ಕಾಡಾನೆ ದಾಳಿಗೆ ಒಂದೇ ಊರಿನ ಇಬ್ಬರು ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಕೆರೆಕಟ್ಟೆ ಸಮೀಪದ ಕೆರೆಗದ್ದೆಯ ಉಮೇಶ್(43) ಮತ್ತ ಹರೀಶ್(42) ಮೃತಪಟ್ಟವರು. ಹರೀಶ್ ಅವರು ಬಿಜೆಪಿ ಶಕ್ತಿ ಕೇಂದ್ರದ ಕೆರೆಕಟ್ಟೆ ಭಾಗದ ಅಧ್ಯಕ್ಷರಾಗಿದ್ದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಂತೆ ಇರುವ ತಮ್ಮ ಮನೆಯ ಬಳಿಯಿಂದ ಕಾಡಿಗೆ ಸೊಪ್ಪು ತರಲು ಹೋಗಿದ್ದಾಗ ಆನೆ ದಾಳಿಗೆ ಸಿಲುಕಿದ್ದಾರೆ ಎನ್ನಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.