ಜಯಪುರ(ಬಾಳೆಹೊನ್ನೂರು): 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಕರಾಳ ಅಧ್ಯಾಯವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಜಿಲ್ಲಾ ದಿಶಾ ಸಮಿತಿ ಸದಸ್ಯ ಮಣಿಕಂಠನ್ ಕಂದಸ್ವಾಮಿ ಹೇಳಿದರು.
ಬಿಜೆಪಿ ವತಿಯಿಂದ ಜಯಪುರದಲ್ಲಿ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಕಗ್ಗೊಲೆ ಮಾಡಿದ ಅಪಕೀರ್ತಿ ಅಂದಿನ ಕಾಂಗ್ರೆಸ್ ಸರ್ಕಾರದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಗೆ ಸಲ್ಲುತ್ತದೆ ಎಂದರು.
ಜಯಪುರದ ಬಸ್ ನಿಲ್ದಾಣದಿಂದ ಶೃಂಗೇರಿ ವೃತ್ತದವರೆಗೆ ಬಿಜೆಪಿ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಮೆರವಣಿಗೆ ನಡೆಸಿದರು.
ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್, ಮೇಗುಂದಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಾರ್ತಿಕ್, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಅನಿಲ್ ಶಿವಪುರ, ತಾಲ್ಲೂಕು ರೈತಮೋರ್ಚಾ ಅಧ್ಯಕ್ಷ ಸಂತೋಷ್ ಅರೇನೂರು, ಸಂಪತ್, ಹಾಲಪ್ಪ, ಸಂದೇಶ್, ಜಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಜಯ ಮುರುಗೇಶ್, ಮಂಜುನಾಥ್, ಸುಧಾಕರ್, ರೇಖಾ ಪಟೇಲ್, ನವೀನ್, ಸುಭಾಷ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.