ADVERTISEMENT

ಕಡೂರು | ಹಳೆ ಪಿಂಚಣಿ ವ್ಯವಸ್ಥೆ ಮುಂದುವರಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 5:57 IST
Last Updated 3 ಡಿಸೆಂಬರ್ 2022, 5:57 IST
ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಪಿಂಚಣಿ ಸೌಲಭ್ಯ ಅನುಷ್ಠಾನಕ್ಕೆ ಒತ್ತಾಯಿಸಿ ಕಡೂರಿನಲ್ಲಿ ಎನ್‌ಪಿಎಸ್ ನೌಕರರ ಬಳಗದವರು ಶಾಸಕ ಬೆಳ್ಳಿಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು
ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಪಿಂಚಣಿ ಸೌಲಭ್ಯ ಅನುಷ್ಠಾನಕ್ಕೆ ಒತ್ತಾಯಿಸಿ ಕಡೂರಿನಲ್ಲಿ ಎನ್‌ಪಿಎಸ್ ನೌಕರರ ಬಳಗದವರು ಶಾಸಕ ಬೆಳ್ಳಿಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು   

ಕಡೂರು: ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಪಟ್ಟಣದ ಎನ್‌ಪಿಎಸ್ ನೌಕರರ ಬಳಗವು ಶುಕ್ರವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿತು.

ಪಟ್ಟಣದ ಗಣಪತಿ ಪೆಂಡಾಲ್ ಆವರಣದಿಂದ ಶಾಸಕ ಬೆಳ್ಳಿಪ್ರಕಾಶ್ ಅವರ ಕಚೇರಿಯವರೆಗೆ ಮೌನ ಮೆರವಣಿಗೆಯಲ್ಲಿ ಸಾಗಿ ಮನವಿ ಸಲ್ಲಿಸಲಾಯಿತು. ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಬಗ್ಗೆ ನೌಕರರ ಪರವಾಗಿ ಧ್ವನಿ ಎತ್ತಬೇಕೆಂದು ಪ್ರತಿಭಟನಕಾರರು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಶಾಸಕ ಬೆಳ್ಳಿಪ್ರಕಾಶ್ ಮಾತನಾಡಿ, ‘ಹೋರಾಟದಲ್ಲಿ ನಾನೂ ಭಾಗಿಯಾಗಿದ್ದೇನೆ. ನೂತನ ಪಿಂಚೂಣಿ ಯೋಜನೆಯನ್ನು ಕೈ ಬಿಟ್ಟು ಹಳೆಯ ಪಿಂಚಣಿ ಯೋಜನೆಯನ್ನೇ ಉಳಿಸಬೇಕೆಂಬ ಬೇಡಿಕೆಗೆ ನನ್ನ ಸಹಮತವಿದೆ. ಹೊಸ ಯೋಜನೆಯಿಂದ ನೌಕರರಿಗೆ ಬಹಳಷ್ಟು ತೊಂದರೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇನೆ’ ಎಂದರು.

ADVERTISEMENT

ತಹಶೀಲ್ದಾರ್ ಜೆ.ಉಮೇಶ್, ಸರಕಾರಿ ಎನ್‌ಪಿಎಸ್ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ಪ್ರಶಾಂತ್, ಕಾರ್ಯದರ್ಶಿ ಲೋಕೇಶ್, ಸೋಮೇಶ್ವರ ಪ್ರಸನ್ನ, ಸರ್ಕಾರಿ ನೌಕರರ ಸಂಘದ
ಅಧ್ಯಕ್ಷ ಕೆ.ಆರ್. ಸುರೇಶ್, ಪ್ರಧಾನ ಕಾರ್ಯದರ್ಶಿ ಅರೇಹಳ್ಳಿ ಮಲ್ಲಿಕಾರ್ಜುನ್, ಜಗದೀಶ್,
ಗೀತಾ, ಲಿಂಗರಾಜು,
ಭೈರೇಗೌಡ, ಸಿಡಿಪಿಒ ಪ್ರೇಮ್‌ಕುಮಾರ್, ಮಂಜಯ್ಯ, ವೈ.ಎಂ. ತಿಪ್ಪೇಶ್, ಎಂ.ಬಿ. ಮಂಜುನಾಥ್, ರಾಜು, ತಿಮ್ಮಪ್ಪ, ಬಿ. ಮೋಹನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.