ADVERTISEMENT

ಚಿಕ್ಕಮಗಳೂರು: ಜಿಲ್ಲಾ ಮಟ್ಟದ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 5:34 IST
Last Updated 19 ನವೆಂಬರ್ 2025, 5:34 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಚಿಕ್ಕಮಗಳೂರು: 2025-26ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೃಷಿಯ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಅತ್ಯುತ್ತಮ ರೈತರಿಗೆ ನೀಡುವ ಜಿಲ್ಲಾ ಮಟ್ಟದ ರೈತ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಆಸಕ್ತ ರೈತರು ಅರ್ಜಿಗಳನ್ನು ಜಂಟಿ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ನ.29ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕಿ ವಿಜಯಲಕ್ಷ್ಮಿ ಚಂದ್ರಶೇಖರ್ (81975 34708) ಅವರನ್ನು ಸಂಪರ್ಕಿಸ ಬಹುದು. ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇಯನ್ನೂ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.