
ಪ್ರಜಾವಾಣಿ ವಾರ್ತೆ
ತರೀಕೆರೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ತರೀಕೆರೆ ಸಮೀಪದ ಎ.ರಾಮನಹಳ್ಳಿಯಲ್ಲಿ ಗುರುವಾರ ನಡೆದಿದೆ.
ರಾಮಕೃಷ್ಣಪ್ಪ (67) ಗಾಯಗೊಂಡವರು. ಕೈ, ಕಾಲುಗಳಿಗೆ ಕರಡಿ ಕಚ್ಚಿ ಗಾಯಗೊಳಿಸಿದ್ದು, ತರೀಕೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತರೀಕೆರೆ ವಲಯ ಅರಣ್ಯಾಧಿಕಾರಿ ಆಸಿಫ್ ಅಹಮದ್ ತಿಳಿಸಿದ್ದಾರೆ.
ಅವರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಅರಣ್ಯ ಇಲಾಖೆಯ ಪ್ರಾದೇಶಿಕ ವಲಯ ಕಚೇರಿ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ತರೀಕೆರೆ ವಲಯ ಅರಣ್ಯಾಧಿಕಾರಿ ಆಸಿಫ್ ಅಹಮದ್, ಉಪ ವಲಯ ಅರಣ್ಯಾಧಿಕಾರಿ ವಿಜಯ್ ಬಿ.ಕೆ., ಅರಣ್ಯ ರಕ್ಷಕ ರಾಜೇಂದ್ರ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.