ADVERTISEMENT

ಉದ್ದೇಬೋರನಹಳ್ಳಿಯಲ್ಲಿ ರೈತ ದಿನಾಚರಣೆ 22ಕ್ಕೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 5:17 IST
Last Updated 20 ಡಿಸೆಂಬರ್ 2025, 5:17 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಚಿಕ್ಕಮಗಳೂರು: ರಾಜ್ಯ ರೈತ ಸಂಘ ಉದ್ದೇಬೋರನಹಳ್ಳಿ ಶಾಖೆ ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಉದ್ದೇಬೋರನಹಳ್ಳಿಯಲ್ಲಿ ಡಿ. 22ರಂದು ಬೆಳಿಗ್ಗೆ 10ಗಂಟೆಗೆ ರೈತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು. 

ನೈಸರ್ಗಿಕ ಕೃಷಿ ಬಗ್ಗೆ ಚಂದ್ರಶೇಖರ ನಾರಾಯಣಪುರ ಉಪನ್ಯಾಸ ನೀಡಲಿದ್ದಾರೆ. ಸಿರಿಧಾನ್ಯ ಮತ್ತು ಬಳಕೆ ಬಗ್ಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಮಾತನಾಡಲಿದ್ದಾರೆ. ತೋಟಗಾರಿಕೆಗೆ ಕೃಷಿ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಾನಪದ ಕಲಾಮೇಳಗಳು ಹಾಗೂ ಜೋಡೆತ್ತಿನ ಗಾಡಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು, ರೈತ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ADVERTISEMENT

ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಕೂಡ ಏರ್ಪಡಿಸಲಾಗಿದ್ದು, ಸುತ್ತಮುತ್ತಲ ಗ್ರಾಮಗಳ ರೈತರು ಇದರ ಉಪಯೋಗ ಪಡೆಯಬೇಕು ಎಂದು ತಿಳಿಸಿದರು.  

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವರಾಜೇಗೌಡ, ಗೌರವಾಧ್ಯಕ್ಷ ಬಸವರಾಜು, ಮುಖಂಡ ಬಸವರಾಜು, ಹೋಬಳಿ ಕಾರ್ಯದರ್ಶಿ ಪ್ರಕಾಶ್, ರವಿಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.