ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಕೊಕ್ರಾಡಿ ಗ್ರಾಮದ ಅತ್ರಿಜಾಲು ಸಮೀಪದ ನಿವಾಸಿ ಚೇತನ್ (35) ಹಾಗೂ ಅವರ ಪುತ್ರಿ ತ್ರಿಶಾ ಮೃತಪಟ್ಟಿದ್ದಾರೆ. ಚೇತನ್ ಅವರ ಪತ್ನಿ ಆಶಾ (30) ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ಮನೆಯೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು. ತ್ರಿಶಾ ಸೋಮವಾರ ರಾತ್ರಿಯೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಚೇತನ್ ಅವರು ಮಂಗಳವಾರ ರಾತ್ರಿ ಸಾವನ್ನಪ್ಪಿದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.