ADVERTISEMENT

ಭದ್ರಾ ಅಭಯಾರಣ್ಯದಲ್ಲಿ ಹುಲಿ ಸಾವು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 21:40 IST
Last Updated 7 ಆಗಸ್ಟ್ 2025, 21:40 IST
ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟಿರುವ ಹೆಣ್ಣು ಹುಲಿ
ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟಿರುವ ಹೆಣ್ಣು ಹುಲಿ   

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವಲಯದ ಸಾವೆ ಅರಣ್ಯ ಪ್ರದೇಶದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ.

ಅಂದಾಜು 7 ವರ್ಷದ ಹೆಣ್ಣು ಹುಲಿ ಎಂದು ಗುರುತಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಗಸ್ತು ತಿರುಗುವಾಗ ದೊರೆತಿದೆ.

ಹುಲಿಗಳ ನಡುವಿನ ಕಾದಾಟದಲ್ಲಿ ಗಾಯಗೊಂಡು ಸಾವನ್ನಪ್ಪಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.  ಲೋಹ ಪರಿಶೋಧಕ ಯಂತ್ರ ಬಳಸಿ ದೇಹದಳಗೆ ಲೋಹ, ಮದ್ದುಗುಂಡು ಇದೆಯೇ ಎಂದು ಪರಿಶೀಲನೆ ಮಾಡಲಾಗಿದೆ. ಸಾವಿನ ನಿಖರ ಮಾಹಿತಿ ತಿಳಿಯಲು ಹುಲಿ ದೇಹದ ಕೆಲವು ತುಣುಕು ಮತ್ತು ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಲಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮರಣೋತ್ತರ ಪರೀಕ್ಷೆ ವೇಳೆ ಲಕ್ಕವಳ್ಳಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಕಾರಿ ಸಂತೋಷ್ ಸಾಗರ, ವಲಯ ಅರಣ್ಯಾಧಿಕಾರಿ ಸಂತೋಷ್ ಸೂರಿಮಠ, ಗೌರವ ವನ್ಯಜೀವಿ ಪರಿಪಾಲಕ ಜಿ. ವೀರೇಶ್, ವೈಲ್ಡ್ ಕೆರ್ ಸಂಸ್ಥೆಯ ಮುಖ್ಯಸ್ಥ ಮಧು ಮೂಗುತಿಹಳ್ಳಿ, ವಿನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.