ಕೊಟ್ಟಿಗೆಹಾರ: ಬಾಳೂರು ಹೊರಟ್ಟಿ ಗ್ರಾಮದಲ್ಲಿ ಬಿ.ಆರ್.ವಿಜೇಂದ್ರ ಎಂಬುವವರಿಗೆ ಸೇರಿದ್ದ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಕಾಫಿ, ಏಲಕ್ಕಿ, ಮೆಣಸು, ಅಡಿಕೆ ಗಿಡಗಳು ಸುಟ್ಟು ಭಸ್ಮವಾಗಿವೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ದೂರವಾಣಿ ಕರೆ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಚುನಾವಣೆಯ ಕರ್ತವ್ಯದಲ್ಲಿ ಬೇರೆಡೆ ಇದ್ದಿದ್ದರಿಂದ ಕೂಡಲೇ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ. ಗ್ರಾಮಸ್ಥರು ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಸಾಕಷ್ಟು ಬೆಳೆಹಾನಿ ಸಂಭವಿಸಿತ್ತು.
‘ಇದು ಕಂದಾಯ ಭೂಮಿಯಾಗಿರುವುದರಿಂದ ತಹಶೀಲ್ದಾರ್ ವ್ಯಾಪ್ತಿಗೆ ಒಳಪಡುತ್ತದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರೈತರಿಗೆ ಪರಿಹಾರದ ಮೂಲಕ ನ್ಯಾಯ ಒದಗಿಸಬೇಕು’ ಎಂದು ಅರಣ್ಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.