ADVERTISEMENT

ಚಿಕ್ಕಮಗಳೂರು | ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2023, 4:41 IST
Last Updated 23 ಜುಲೈ 2023, 4:41 IST
ಬೋನಿಗೆ ಬಿದ್ದ ಚಿರತೆ
ಬೋನಿಗೆ ಬಿದ್ದ ಚಿರತೆ    

ಚಿಕ್ಕಮಗಳೂರು: ನಗರದ ಹೊರ ವಲಯದ ಹೌಸಿಂಗ್ ಬೋರ್ಡ್ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.

ಹಲವು ದಿನಗಳಿಂದ ಹೌಸಿಂಗ್ ಬೋರ್ಡ್‌ ಬಡಾವಣೆ ಸುತ್ತಮುತ್ತ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತ್ತು. ನ್ಯಾಯಾಲಯ ಸಂಕೀರ್ಣದ ಸಮೀಪ ಅರಣ್ಯ ಇಲಾಖೆ ಸಿಬ್ಬಂದಿ ಬೋನಿ ಇರಿಸಿದ್ದರು. ಶನಿವಾರ ರಾತ್ರಿ ಬೋನಿಗೆ ಬಿದ್ದಿದ್ದು, ಚಿರತೆಗೆ ನಾಲ್ಕರಿಂದ ಐದು ವರ್ಷ ಇರಬಹುದು. ಅದನ್ನು ಕಾಡಿಗೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT