ADVERTISEMENT

ಕುದುರೆಮುಖ ಅರಣ್ಯದಲ್ಲಿ ಬೆಂಕಿ: 10 ಎಕರೆಯ ಗಿಡಮರ ಆಹುತಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2019, 20:14 IST
Last Updated 4 ಮಾರ್ಚ್ 2019, 20:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕುದುರೆಮುಖ ಬಳಿಯ ಗಣಪತಿಕಟ್ಟೆ ಅರಣ್ಯದಲ್ಲಿ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡು, ಸುಮಾರು 10 ಎಕರೆಯಷ್ಟು ಮರಗಿಡಗಳು ಸುಟ್ಟುಹೋಗಿವೆ.

ಕಾರ್ಕಳ ವನ್ಯಜೀವಿ ವಿಭಾಗದ ಡಿಎಫ್‌ಒ ರುದ್ರನ್‌, ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಸಂಜೆ 7ರ ಹೊತ್ತಿಗೆ ಅರಣ್ಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ತಹಬದಿಗೆ ತಂದಿದ್ದಾರೆ’ ಎಂದು ತಿಳಿಸಿದರು.

‘ಮುನ್ನೆಚ್ಚರಿಕೆ ಕ್ರಮವಾಗಿ ಮೊದಲೇ ಎರಡು ತಂಡವನ್ನು ನಿಯೋಜಿಸಲಾಗಿತ್ತು. ಆ ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. 9 ಗಂಟೆಗೆ ಬೆಂಕಿಯನ್ನು ನಂದಿಸಲಾಗಿದೆ’ ಎಂದು ಹೇಳಿದರು.

ADVERTISEMENT

ಇದೊಂದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.