ADVERTISEMENT

ನರಸಿಂಹರಾಜಪುರ: ಕೋಟೆ ಮಾರಿಕಾಂಬ ಜಾತ್ರೋತ್ಸವ ಸಂಪನ್ನ

​ಪ್ರಜಾವಾಣಿ ವಾರ್ತೆ
Published 23 ಮೇ 2025, 14:31 IST
Last Updated 23 ಮೇ 2025, 14:31 IST
ನರಸಿಂಹರಾಜಪುರದಲ್ಲಿ ಕೋಟೆ ಮಾರಿಕಾಂಬ ಜಾತ್ರೆಯ ಕೊನೆಯ ದಿನವಾದ ಗುರುವಾರ ದೇವಿಯ ವಿಸರ್ಜನಾ ಮೆರವಣಿಗೆ ಅದ್ಧೂರಿಯಿಂದ ನಡೆಯಿತು
ನರಸಿಂಹರಾಜಪುರದಲ್ಲಿ ಕೋಟೆ ಮಾರಿಕಾಂಬ ಜಾತ್ರೆಯ ಕೊನೆಯ ದಿನವಾದ ಗುರುವಾರ ದೇವಿಯ ವಿಸರ್ಜನಾ ಮೆರವಣಿಗೆ ಅದ್ಧೂರಿಯಿಂದ ನಡೆಯಿತು   

ನರಸಿಂಹರಾಜಪುರ: ಕೋಟೆ ಮಾರಿಕಾಂಬ ಜಾತ್ರೆಯ ಕೊನೆಯ ದಿನವಾದ ಗುರುವಾರ ರಾತ್ರಿ ದೇವಿಯ ವಿಸರ್ಜನಾ ಮೆರವಣಿಗೆ ಸಂಪನ್ನಗೊಂಡಿತು.

ದೇವಿಯ ವಿಗ್ರಹವನ್ನು ರಾತ್ರಿ 11ರ ವೇಳೆಗೆ ಗ್ರಾಮ ದೇವತೆಗಳಾದ ಹಳೇಪೇಟೆ ಗುತ್ತ್ಯಮ್ಮ, ಮೇದರ ಬೀದಿ ಅಂತರಘಟ್ಟಮ್ಮ ಹಾಗೂ ಮಡಬೂರು ದಾನಿವಾಸ ದುರ್ಗಾಂಬ ದೇವತೆಗಳೊಂದಿಗೆ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಯಿತು. ಚೌಡಿ ಗುಂಡಿಯ ಮುಂಭಾಗದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಹಳೆ ಶಿವಮೊಗ್ಗ ರಸ್ತೆಯ ಮಾರಿ ಬನದಲ್ಲಿ ದೇವಿಯನ್ನು ವಿಸರ್ಜಿಸಲಾಯಿತು.

ಕೋಟೆ ಮಾರಿಕಾಂಬ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.