ADVERTISEMENT

ಸ್ವಚ್ಛತೆ ಹರಿಕಾರ ಗಾಂಧಿ: ಸುರೇಶ್‌

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 4:24 IST
Last Updated 3 ಅಕ್ಟೋಬರ್ 2022, 4:24 IST
ತರೀಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿದರು.
ತರೀಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿದರು.   

ತರೀಕೆರೆ: ಮಹಾತ್ಮ ಗಾಂಧಿ ಅವರ ಆಶಯದಂತೆ ನಾವು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪಟ್ಟಣದ ಪುರಸಭೆ ಸ್ವಚ್ಛತೆಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಡಿ.ಎಸ್. ಸುರೇಶ್ ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ನಮನ ಸಲ್ಲಿಸಿ ಮಾತನಾಡಿದರು.

‘ಗಾಂಧಿ ಸ್ವಚ್ಛತೆಗೆ ಆದ್ಯತೆ ನೀಡಿದರೆ, ಲಾಲ್ ಬಹದ್ದೂರ್ ಶಾಸ್ತಿ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಒತ್ತು ನೀಡಿದರು ಎಂದರು.

ADVERTISEMENT

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಟಿ.ಎಸ್.ಗಣೇಶ್ ಉಪನ್ಯಾಸ ನೀಡಿ, ಗಾಂಧೀಜಿ ತತ್ವಗಳು ಇಂದಿಗೂ ಪ್ರಸುತ್ತ. ಅವರ ಆದರ್ಶಗಳನ್ನು ನಾವು ಆಡಳಿತದಲ್ಲಿ ಅನುಸರಿಸಬೇಕು ಎಂದರು.

ತಹಶೀಲ್ದಾರ್ ಪೂರ್ಣಿಮಾ, ಇಒ ಗೀತಾ ಶಂಕರ್ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಮಹಂತೇಶ್, ಉಪ ತಹಶೀಲ್ದಾರ್ ಗೋವಿಂದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಹೂನ್ನೇಶ್ ಕುಮಾರ್, ತಾಲ್ಲೂಕು ಆರೋಗ್ಯಧಿಕಾರಿ ಚಂದ್ರಶೇಖರ್, ತೋಟಗಾರಿಕೆ ಸಹಾಯಕ ನಿರ್ದೇಶಕ ಯತಿರಾಜ್, ಕೃಷಿ ಸಹಾಯಕ ನಿರ್ದೇಶಕ ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.